ತಾಳಿಕೋಟಿಯಲ್ಲಿ ವಿಶ್ವ ಏಡ್ಸ್ ದಿನ ಆಚರಣೆ | ವಿದ್ಯಾರ್ಥಿಗಳ ಜಾಗೃತಿ ಜಾಥಾ | Praja Dhvani News
FEATUREDLATEST_NEWSLOCAL NEWSEDUCATION
ವಿಜಯಪುರ ಜಿಲ್ಲೆಯ ತಾಳಿಕೋಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಏಡ್ಸ್ ದಿನಾಚರಣೆ ನೆರವೇರಿತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಗಿದ್ದು, ಸಾರ್ವಜನಿಕರಲ್ಲಿ HIV/AIDS ಬಗ್ಗೆ ಜಾಗೃತಿ ಮೂಡಿಸಲಾಯಿತು.
ನಂತರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಆರೋಗ್ಯಾಧಿಕಾರಿ ಡಾ. ಶ್ರೀಶೈಲ ಹುಕ್ಕೇರಿ ಅವರು “AIDS ಕುರಿತು ಮುಂಜಾಗ್ರತೆ ಮತ್ತು ಜಾಗೃತಿ ಅತ್ಯಗತ್ಯ” ಎಂದು ಹೇಳಿದರು.
ICTC ಸಮಾಲೋಚಕಿ ಶ್ರೀಮತಿ ಕಲ್ಪನಾ ಹೂಗಾರ HIV ಸೋಂಕು, ಮುಂಜಾಗ್ರತೆ ಮತ್ತು ಯುವಕರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಿಳಿಸಿದರು.
ಕಾರ್ಯಕ್ರಮದಲ್ಲಿ:
✔ ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ
✔ NGO ವರ್ಕರ್ಸ್
✔ SVM ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು
✔ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
ವರದಿ: ರಮೇಶ್ ದಲ್ಲಾಳಿ

