ಬಿಜೆಪಿ ಸುಳ್ಳು ಹೇಳುವ ಮೂಲಕ ಅಧಿಕಾರ ನಡೆಸುತ್ತಿದೆ! | ಎಂ.ಬಿ. ಪಾಟೀಲ, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ
LATEST_NEWSLOCAL NEWS
ಹೂವಿನಹಿಪ್ಪರಗಿ: ಟಿ.ಎ. ಡಿ ಎ ಗಾಗಿ ಸೀಮಿತವಾದವರಿಗೆ ಮತ ನೀಡದೇ ಜಿಲ್ಲೆಯ ಅಭಿವೃದ್ದಿಗಾಗಿ ಕಾಂಗ್ರೆಸ ಪಕ್ಷದ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಮತ ನೀಡಬೇಕು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಹೇಳಿದರು.
ಹೂವಿನ ಹಿಪ್ಪರಗಿ ಗ್ರಾಮದಲ್ಲಿ ಕಾಂಗ್ರೆಸ ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಮೋದಿ ಸರ್ಕಾರ ಬಂದ್ರೆ "ಅಚ್ಚೆ ದಿನ ಆಯೆಂಗೆ" ಎಂದು ಹೇಳಿದ್ದಿರಿ ದೇಶದಲ್ಲಿ ಬಿಜೆಪಿ ಸರ್ಕಾರ ಬಂದ್ ಮೇಲೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾಗಿದೆ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷವಾದರೂ ಅಚ್ಚೆ ದಿನ್ ಬಂದಿಲ್ಲಾ.
ಬದಲಾವಣೆ ಕಾಲ ಬಂದಾಗಿದೆ ಕಾಂಗ್ರೆಸಗೆ ಮತ ನೀಡುವ ಮೂಲಕ ಬಿಜೆಪಿ ಸರ್ಕಾರವನ್ನ ಕಿತ್ತೆಸೆಯಬೇಕಾಗಿದೆ ಎಂದರು. ಮೋದಿ ಸರ್ಕಾರ ದಿನ ಬಳಕೆ ವಸ್ತು ಸೇರಿದಂತೆ ಎಲ್ಲದಕ್ಕೂ ಜಿಎಸ್ ಟಿ ಲಾಗೋ ಮಾಡಲಾಗಿದೆ.
ದೇಶವನ್ನು ಸ್ವಾವಲಂಬಿಯಾಗಿ ಕಟ್ಟಿದ್ದು ಕಾಂಗ್ರೆಸ್. ಸೂಜಿಯೂ ಉತ್ಪಾದನೆಯಾಗದ ದೇಶದಲ್ಲಿ ದೊಡ್ಡ ದೊಡ್ಡ ಖಾರಖಾನೆ, ಆಸ್ಪತ್ರೆ, ವಿಶ್ವವಿದ್ಯಾಲಯ, ಅಣೆಕಟ್ಟುಗಳನ್ನು ಕಟ್ಟಿದ್ದು ನಮ್ಮ ಪಕ್ಷ. ಮೋದಿಯವರು ಬಂದ ಮೇಲೆ ಎಲ್ಲ ಆಗಿದೆ ಎನ್ನುವುದು ಸುಳ್ಳು ಎಂದು ಹೇಳಿದರು.
ಬೆಲೆ ಏರಿಕೆಯಿಂದ ದೇಶ ಬಸವಳಿದಿದೆ. ಸಿಲಿಂಡರ್ ಸೇರಿ, ಉಣ್ಣುವ ಎಣ್ಣೆ ಎಲ್ಲ ತುಟ್ಟಿಯಾಗಿದೆ. ಉದ್ಯೋಗ ನೀಡಲಿಲ್ಲ, ರೈತರ ಏಳಿಗೆ ಬಯಸಲಿಲ್ಲ. . ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಾಮಾಣಿಕ ಎಂದು ಇಮೇಜ್ ಸೃಷ್ಟಿಸಿಕೊಂಡಿದ್ದ ಮೋದಿಯವರ ಬಣ್ಣ ಚುನಾವಣಾ ಬಾಂಡ್‌ನಿಂದ ಬಯಲಾಯಿತು.
ಸ್ವಿಸ್ ಬ್ಯಾಂಕಿನಿಂದ ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ನೀಡುವುದಾಗಿ ಹೇಳಿದ್ದರು ಯಾರಿಗಾದರೂ ದುಡ್ಡು ಬಂತಾ ಎಂದು ಪ್ರಶ್ನೇ ಮಾಡಿದ ಅವರು. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುತ್ತೇವೆ. ನೀರಾವರಿ, ಪ್ರವಾಸೋದ್ಯಮ ಸೇರಿ ಉಳಿದೆಲ್ಲ ಪ್ರಗತಿಗೆ ಬದ್ಧರಿದ್ದೇವೆ ಎಂದು ಹೇಳಿದರು.
ಎಐಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ ಮಾತನಾಡಿ ದೇಶದಲ್ಲಿ ಕಳೆದ 10 ವರ್ಷದಿಂದ ಬಿಜೆಪಿ ಸರ್ಕಾರ ಸುಳ್ಳು ಹೇಳುವ ಮೂಲಕ ಅಧಿಕಾರ ನಡೆಸುತ್ತಿದೆ.
ರಾಜ್ಯದಲ್ಲಿ ಆಯ್ಕೆ ಆದ ಕಲವೇ ತಿಂಗಳಲ್ಲಿ 5 ಗ್ಯಾರಂಟಿ ಗಳನ್ನ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ನಮ್ಮ ಕಾಂಗ್ರೆಸ ಸರ್ಕಾರ ಎಂದು ಹೇಳಿದರು. ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರು ಸ್ವಾವಲಂಬಿಯಾಗಿ ಜೀವನ ಸಾಗಿಸುತ್ತಿದ್ದಾಳೆ.
ದೇಶದಲ್ಲಿ ಮತ್ತೆ ನಮ್ಮ ಕಾಂಗ್ರೆಸ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳಿಯರಿಗೆ ವರ್ಷಕ್ಕೆ ಒಂದು ಲಕ್ಷ ಸೇರಿದಂತೆ ಹಲವಾರು ಯೋಜನೆಗಳನ್ನ ಹಾಕಿಕೊಂಡಿದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾಂಗ್ರೆಸಗೆ ಮತ ನೀಡುವ ಮೂಲಕ ಮತ್ತೊಮ್ಮೆ ಕಾಂಗ್ರೆಸ ಪಕ್ಷಕ್ಕೆ ಅವಕಾಶ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಆನಂಡಗೌಡ ದೊಡಮನಿ. ಬಸೀರ್ ಶೇಟ್ ಬೇಪಾರಿ. ರಮಿಜಾನ್ ನದಾಫ್. ಸುಭಾಸ ಚಾಯಾಗೋಳ. ಶಿವಪುತ್ರಪ್ಪ ದೇಸಾಯಿ. ಡಾ. ಸಯ್ಯದ್. ಬಿ ಎಸ್ ಪಾಟೀಲ ಯಾಳಗಿ. ಗೌರಮ್ಮ ಮುತ್ತತ್ತಿ. ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

